10ನೇ ತರಗತಿಯಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗವಕಾಶ, ನೀವು ಕೂಡ ಇಂದೇ ಅರ್ಜಿ ಸಲ್ಲಿಸಿ ದೇಶಸೇವೆ ಮಾಡಬಹುದು. ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ನಿಮಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ಮನಸ್ಸಿದ್ಯಾ? ಸೇನೆ ಅಂದ್ರೆ ಯುದ್ಧ ಭೂಮಿಯ ಸೇವೆ ಮಾತ್ರವಲ್ಲ, ಅಲ್ಲಿ ಇನ್ನೂ ಹಲವು ಹುದ್ದೆಗಳಿರುತ್ತವೆ. ಹಾಗಾಗಿ ಹತ್ತನೇ ತರಗತಿ ಪಾಸಾಗಿದ್ದರೂ ಕೂಡ ಸೇನೆಯಲ್ಲಿ ಲಭ್ಯವಿರುವ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವಾಗ ? ಇನ್ನಿತರ ಮಾಹಿತಿಈ ಕೆಳಗಿನಂತಿದೆ.

ಒಟ್ಟೂ 7 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು ಸಾಮಾನ್ಯ ಅಭ್ಯರ್ಥಿಗಳಿಗೆ – 5 ಹುದ್ದೆಗಳು ಮತ್ತು ಒಬಿಸಿಗೆ 2 ಹುದ್ದೆಗಳು (ಒಂದು ಹುದ್ದೆ ಮಾಜಿ ಸೈನಿಕರಿಗೆ ಕಾಯ್ದಿರಿಸಲಾಗಿದೆ) ಇವೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ವಿದ್ಯಾಭ್ಯಾಸ ಮುಗಿಸಿರಬೇಕು. ಮನೆ ಕೆಲಸದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಮರ್ಥರಾಗಿರಬೇಕು. ಜೊತೆಗೆ ಯಾವುದೇ ಸಿವಿಲ್ / ಸರಕಾರಿ ಕಚೇರಿಯಲ್ಲಿ ಆರು ತಿಂಗಳ ಕಾಲ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷದೊಳಗಿರಬೇಕು. ಅದರೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ,ಲಿಖಿತ ಪರೀಕ್ಷೆ, ಮೆಡಿಕಲ್ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18000 ರೂ. ಸಂಬಳ ನಿಗದಿಪಡಿಸಲಾಗಿದೆ.

ಇನ್ನು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 11, 2022. ಆಸಕ್ತ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆ, ಅನುಭವ, ವೃತ್ತಿ, ಜಾತಿ ಪ್ರಮಾಣಪತ್ರ, ವಾಸಸ್ಥಳ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರಮಾಣಪತ್ರದ ನಕಲು ಪ್ರತಿಗಳೊಂದಿಗೆ ಈ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು. ವಿಳಾಸ: ಹೆಚ್ ಕ್ಯೂ ಮೊಡ್(ಆರ್ಮಿ) ಕ್ಯಾಂಪ್, ರಾವ್ ರಾಮ್ ಮಾರ್ಗ್, ನವ ದೆಹಲಿ-110010.

Comments are closed.