ಈ ರೀತಿ ಹೋಟೆಲ್ ಶೈಲಿಯ ಜೀರಾ ರೈಸ್ ಮಾಡಿ ನೋಡಿ, ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿಂತಾರೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಹೋಟೆಲ್ ಶೈಲಿಯ ಜೀರಾ ರೈಸ್ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಹೋಟೆಲ್ ಶೈಲಿಯ ಜೀರಾ ರೈಸ್ ಮಾಡಲು ಬೇಕಾಗುವ ಪದಾರ್ಥಗಳು: ಅರ್ಧ ಕೆಜಿ ಜೀರಾ ರೈಸ್, 2 ಈರುಳ್ಳಿ, 50ml ತುಪ್ಪ, 15 – 20 ಗೋಡಂಬಿ, 8 – 10 ಹಸಿಮೆಣಸಿನಕಾಯಿ, 1 ಚಮಚ ಜೀರಿಗೆ, 1 ಚಮಚ ವೈಟ್ ಪೆಪ್ಪರ್ ಪೌಡರ್, 1 ಚಮಚ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ಹೋಟೆಲ್ ಶೈಲಿಯ ಜೀರಾ ರೈಸ್ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಕುಕ್ಕರ್ ನನ್ನು ಇಟ್ಟುಕೊಂಡು ಅದಕ್ಕೆ ಅರ್ಧ ಕೆಜಿ ಅಕ್ಕಿ, 3 ಲೋಟ ನೀರು, ರುಚಿಗೆ ತಕ್ಕಷ್ಟು ಉಪ್ಪು, 1 ಚಮಚ ಎಣ್ಣೆಯನ್ನು ಹಾಕಿ ಮುಚ್ಚಳವನ್ನು ಮುಚ್ಚಿ 2 ವಿಷಲ್ ಕೂಗಿಸಿಕೊಂಡು ತಣ್ಣಗಾಗಲು ಬಿಡಿ.

ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ತುಪ್ಪವನ್ನು ಹಾಕಿ ಕಾಯಲು ಬಿಡಿ. ತುಪ್ಪ ಕಾದ ನಂತರ ಗೋಡಂಬಿಯನ್ನು ಹಾಕಿ ಫ್ರೈ ಮಾಡಿಕೊಂಡು ಒಂದು ಬಟ್ಟಲಿಗೆ ತೆಗೆದುಕೊಳ್ಳಿ. ಮತ್ತೆ ಅದೇ ಬಾಣಲೆಗೆ ಜೀರಿಗೆ, ಉದ್ದನೆ ಹಚ್ಚಿದ ಹಸಿಮೆಣಸಿನಕಾಯಿಯನ್ನು ಹಾಕಿ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಸಣ್ಣಗೆ ಹಚ್ಚಿದ ಈರುಳ್ಳಿಯನ್ನು ಹಾಕಿ ಕಡಿಮೆ ಉರಿಯಲ್ಲಿ 3 – 4 ನಿಮಿಷಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಗ್ಯಾಸ್ ಆಫ್ ಮಾಡಿಕೊಳ್ಳಿ.ಕೊನೆಯದಾಗಿ ಇದೇ ಬಾಣಲೆಗೆ ಕುಕ್ಕರ್ ನಲ್ಲಿ ಬೇಯಿಸಿಕೊಂಡ ಅನ್ನ, ವೈಟ್ ಪೆಪ್ಪರ್ ಪೌಡರ್, ಗೋಡಂಬಿಯನ್ನು ಹಾಕಿ ಮಿಕ್ಸ್ ಮಾಡಿಕೊಂಡರೆ ಹೋಟೆಲ್ ಶೈಲಿಯ ಜೀರಾ ರೈಸ್ ಸವಿಯಲು ಸಿದ್ದ.

Comments are closed.