ನಮ್ಮ ಕೆ ಪಿ ಎಸ್ ಸಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ; ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಸಂಬಳ ಎಷ್ಟು ಗೊತ್ತೇ??

ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕ ಸಭಾ ಆಯೋಗ, ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳೋಣ.

ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಒಟ್ಟೂ 188 ಅಸಿಸ್ಟೆಂಟ್ ಎಂಜಿನಿಯರ್ (ಗ್ರೇಡ್-1-) ಹುದ್ದೆಗಳು ಖಾಲಿ ಇವೆ. ಕರ್ನಾಟಕ ಲೋಕ ಸೇವಾ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಎಂಜಿನಿಯರ್(ಗ್ರೇಡ್-1) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್/ಎನ್ವಿರಾನ್ಮೆಂಟಲ್ ವಿಭಾಗದಲ್ಲಿ ಬಿಇ ಮುಗಿಸಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್ 30, 2022ಕ್ಕೆ 18-35 ವರ್ಷ ಮೀರಿರಬಾರದು. ಆದರೆ ಎಸ್ ಸಿ ಎಸ್ ಟಿ /ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ 2ಎ/2ಬಿ/3ಎ &3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

kpsc jobs | ನಮ್ಮ ಕೆ ಪಿ ಎಸ್ ಸಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ; ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಸಂಬಳ ಎಷ್ಟು ಗೊತ್ತೇ??
ನಮ್ಮ ಕೆ ಪಿ ಎಸ್ ಸಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ; ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಸಂಬಳ ಎಷ್ಟು ಗೊತ್ತೇ?? 2

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶುಲ್ಕ ಪಾವತಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ಇನ್ನು ಅರ್ಜಿ ಶುಲ್ಕದ ಬಗ್ಗೆ ಹೇಳುವುದಾದರೆ, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗLige ರೂ.300 ಅರ್ಜಿ ಶುಲ್ಕವಿದ್ದರೆ ಎಸ್ ಸಿ ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ ರೂ.35ನ್ನು ಭರಿಸಬೇಕು. ಆನ್ಲೈನ್ ಮೂಲಕ ಶುಲ್ಕವನ್ನು ಭರಿಸಬೇಕಾಗುತ್ತದೆ.

ಕರ್ನಾಟಕ ಲೋಕ ಸೇವಾ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಎಂಜಿನಿಯರ್(ಗ್ರೇಡ್-1) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ 43,100-83,900ರೂಗಳವರೆಗೆ ತಿಂಗಳ ಸಂಬಳ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ kpsc.kar.nic.in ಗೆ ಭೇಟಿ ನೀಡಿ.

Comments are closed.