ರಕ್ಷಿತಾ ರವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮಕ್ಕೆ 1 ಎಪಿಸೋಡಿಗೆ ಪಡೆಯುವ ಸಂಭಾವನೆ ಎಷ್ಟು ಲಕ್ಷ ಗೊತ್ತೆ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರರಂಗದಲ್ಲಿ ನಟಿ ರಕ್ಷಿತ ರವರ ಸಿನಿಮಾಗಳು ಈಗಲೂ ಕೂಡ ಕನ್ನಡಿಗರ ಮನದಲ್ಲಿ ಅಚ್ಚಳಿಯದೇ ಉಳಿದಿವೆ, ಕನ್ನಡದ ಬಹುತೇಕ ಟಾಪ್ ನಟರ ಜೊತೆ ನಟನೆ ಮಾಡಿರುವ ರಕ್ಷಿತಾ ಅವರು ಕೆಲವೇ ಕೆಲವು ವರ್ಷಗಳ ಹಿಂದೆ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಗುರುತಿಸಿ ಕೊಂಡಿದ್ದರು.

ದರ್ಶನ್, ಸುದೀಪ್, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೀಗೆ ಎಲ್ಲಾ ಟಾಪ್ ನಟರ ಜೊತೆ ನಟನೆ ಮಾಡಿರುವ ರಕ್ಷಿತಾ ರವರು ಇತ್ತೀಚಿನ ದಿನಗಳಲ್ಲಿ ಮದುವೆಯಾದ ಮೇಲೆ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಆದರೆ ಕಿರುತೆರೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಕ್ಷಿತಾ ರವರು ವಿವಿಧ ಕಾರ್ಯಕ್ರಮಗಳಿಗೆ ತೀರ್ಪುಗಾರರಾಗಿ ಕಾಣಿಸಿ ಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ತೀರ್ಪುಗಾರ್ತಿ ಯಾಗಿ ಕಾಣಿಸಿ ಕೊಳ್ಳುತ್ತಿರುವ ನಟಿ ರಕ್ಷಿತಾ ರವರು ಈಗಾಗಲೇ ಮೂರು ಸೀಸನ್ ಗಳನ್ನು ಮುಗಿಸಿದ್ದಾರೆ.

ಒಂದು ಕಾಲದಲ್ಲಿ ಅತ್ಯದ್ಭುತವಾಗಿ ಡ್ಯಾನ್ಸ್ ಮಾಡುತ್ತಾ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿರುವ ರಕ್ಷಿತ ರವರ ಸುಂಟರಗಾಳಿ ಹಾಡು ಈಗಲೂ ಕೂಡ ರಕ್ಷಿತಾ ಎಂದರೆ ಒಂದು ಕ್ಷಣ ಕಣ್ಣ ಮುಂದೆ ಪಾಸಾದಂತೆ ಅನಿಸುತ್ತದೆ, ಹೀಗೆ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮೆರೆದಿದ್ದ ರಕ್ಷಿತಾ ರವರು ಇದೀಗ ಕಿರುತೆರೆಯಲ್ಲಿಯೂ ಕೂಡ ಉತ್ತಮ ಸಂಭಾವನೆಯನ್ನು ಪಡೆದುಕೊಳ್ಳುತ್ತಿದ್ದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ಒಂದು ವೇದಿಕೆಗೆ ಕಿರುತೆರೆಯ ಮೂಲಗಳಿಂದ ಬರೋಬರಿ 1.2 ಲಕ್ಷ ರೂಪಾಯಿಗಳನ್ನು ಪಡೆದು ಕೊಳ್ಳುತ್ತಾರೆ ಎಂಬುದು ತಿಳಿದು ಬಂದಿದೆ. ಈ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ.

Comments are closed.