ಮಾಡಿದ ಶಪಥ ಗಳೆಲ್ಲವನ್ನು ಮಾಡಿ ತೋರಿಸಿರುವ ರಾಜಹುಲಿ ಯಡಿಯೂರಪ್ಪ ನವರಿಂದ ಮತ್ತೊಂದು ಶಪಥ, ಏನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಕಳೆದೆರೆಡು ತಿಂಗಳಲ್ಲಿ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಹೊಸ ನೀರು ಹರಿದು ಹೋಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ನಂತರ ಬಸವರಾಜ ಬೊಮ್ಮಾಯಿ ತಮ್ಮ ಸರಳ ನಡೆಯಿಂದ ರಾಜ್ಯದ ಜನತೆಗೆ ಹತ್ತಿರವಾಗುತ್ತಿದ್ದಾರೆ. ಈ ಮಧ್ಯೆ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ಈ ಮಧ್ಯೆ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೇ ಬಿಜೆಪಿ ಹೈಕಮಾಂಡ್ ಬಿ.ಎಸ್.ವೈ ರವರ ಈ ಪ್ರವಾಸಕ್ಕೆ ಬ್ರೇಕ್ ಹಾಕಿತ್ತು. ಈ ಮಧ್ಯೆ ವಿಧಾನಸೌಧದ ಮೊಗಸಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಭರ್ಜರಿ ಸವಾಲ್ ಎಸೆದಿದ್ದಾರೆ.

ರಾಜ್ಯ ಪ್ರವಾಸದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ನಾನು ಮತ್ತು ನಮ್ಮ ರಾಜ್ಯಾಧ್ಯಕ್ಷರು ಅಧಿವೇಶನ ಮುಗಿದ ನಂತರ ಒಟ್ಟಿಗೆ ರಾಜ್ಯ ಪ್ರವಾಸ ಮಾಡುತ್ತೇವೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸೀಟು ಗೆಲ್ಲಿಸುತ್ತೇವೆ ಎಂದರು. ಜೊತೆಗೆ ಸಿದ್ದರಾಮಯ್ಯನವರ ಬಗ್ಗೆ ಪ್ರಶ್ನೆ ಕೇಳಿದಾಗ, ಒಂದು ವೇಳೆ ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲಿ ಗೆದ್ದರೂ ಸಹ ಅವರನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಮುಕ್ತ ಕಂಠದಿಂದ ಶ್ಲಾಘಿಸಿದ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ತಮಗಿರುವ ಅಪಾರ ಆಡಳಿತ ಜ್ಞಾನದಿಂದ ಅದ್ಭುತವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಸದನ ಆರಂಭಕ್ಕಿಂತ ಮುಂಚೆ, ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪನವರ ಆಶೀರ್ವಾದ ಪಡೆದುಕೊಂಡರು. ಮುಖ್ಯಮಂತ್ರಿ ಬದಲಾದ ಕಾರಣ, ವಿಧಾನಸೌಧದ ಆಸನಗಳು ಬದಲಾಗಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಸಾಲಿನ ಆಸೀನದಲ್ಲಿದ್ದರೇ, ಬಹಳ ದಿನಗಳ ನಂತರ ಕಾನೂನು ಸಚಿವ ಮಾಧುಸ್ವಾಮಿ ಮೊದಲ ಆಸನಕ್ಕೆ ಬಂದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಿಂದಿನ ಸಾಲಿನ ಮೊದಲ ಆಸನ ನೀಡಲಾಗಿದೆ. ಮುಖ್ಯ ಸಚೇತಕನ ಪಕ್ಕದಲ್ಲಿನ ಆಸನವನ್ನ ಬಿ.ಎಸ್.ವೈ ಕೇಳಿದ್ದಾರೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮೂಲಕ ತಿಳಿಸಿ.

Comments are closed.