ಮನೆಯವರೆಲ್ಲರೂ ಮತ್ತೆ ಮತ್ತೆ ಮಾಡು ಎನ್ನುವ ರೀತಿ ಚೆನ್ನ ಮಸಾಲಾ ಮಾಡುವುದು ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಇಂದು ನಾವು ಚೆನ್ನ ಮಸಾಲ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಚೆನ್ನ ಮಸಾಲ ಮಾಡಲು ಬೇಕಾಗುವ ಪದಾರ್ಥಗಳು: 1 ಬಟ್ಟಲು 10 ಗಂಟೆಗಳ ಕಾಲ ನೆನೆಸಿದ ಕಾಬೂಲ್ ಚೆನ್ನ, 2 ಈರುಳ್ಳಿ, 2 ಟೊಮ್ಯಾಟೋ, 1 ಚಮಚ ಶುಂಠಿ ಬೆಳ್ಳುಳ್ಳಿ ಪೇಸ್ಟ್, 1 ಚಮಚ ಧನಿಯಾ ಪುಡಿ, 1 ಚಮಚ ಅಚ್ಚ ಕಾರದ ಪುಡಿ, 2 ಚಮಚ ಎಣ್ಣೆ, 1 ಚಮಚ ಗರಂ ಮಸಾಲ, 1 ಚಮಚ ಜೀರಿಗೆ ಪುಡಿ, ಸ್ವಲ್ಪ ಅರಿಶಿನ ಪುಡಿ, 1 ಚಮಚ ಅಮ್ಚುರ್ ಪೌಡರ್, 2 ಏಲಕ್ಕಿ, 2 ಚಕ್ಕೆ, 2 ಲವಂಗ, ಸ್ವಲ್ಪ ಸೋಂಪುಕಾಳು, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ಕೊತ್ತಂಬರಿ ಸೊಪ್ಪು.

ಚೆನ್ನ ಮಸಾಲ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಕುಕ್ಕರ್ ನನ್ನು ಇಟ್ಟುಕೊಂಡು ಅದಕ್ಕೆ 10 ಗಂಟೆಗಳ ಕಾಲ ನೆನೆಸಿದ ಕಾಬೂಲ್ ಚೆನ್ನ, ಒಂದುವರೆ ಲೋಟದಷ್ಟು ನೀರು, ಉಪ್ಪನ್ನು ಹಾಕಿ ಮುಚ್ಚಳವನ್ನು ಮುಚ್ಚಿ 3 ವಿಷಲ್ ಕೂಗಿಸಿ ಕೊಳ್ಳಿ. ನಂತರ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ 1 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ 1 ಚಕ್ಕೆ, 1 ಲವಂಗ, 1 ಏಲಕ್ಕಿ, ಸ್ವಲ್ಪ ಸೋಂಪುಕಾಳನ್ನು ಹಾಕಿ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಹಚ್ಚಿದ ಈರುಳ್ಳಿಯನ್ನು ಹಾಕಿ 2 ನಿಮಿಷಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಅಚ್ಚಕಾರದ ಪುಡಿ, ದನಿಯಾ ಪುಡಿ, ಜೀರಿಗೆ ಪುಡಿ, ಗರಂಮಸಾಲಾ, ಅಮ್ಚುರ್ ಪೌಡರ್, ಅರಿಶಿನ ಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟನ್ನು ಹಾಕಿ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ 2 ಚಮಚ ನೀರು ಹಾಗೂ ಹಚ್ಚಿದ ಟೊಮೆಟೊವನ್ನು ಹಾಕಿ 5 ನಿಮಿಷಗಳ ಕಾಲ ಫ್ರೈ ಮಾಡಿಕೊಂಡು ತಣ್ಣಗಾಗಲು ಬಿಡಿ.

ನಂತರ ಒಂದು ಮಿಕ್ಸಿ ಜಾರಿಗೆ ಫ್ರೈ ಮಾಡಿಕೊಂಡ ಮಿಶ್ರಣ ಹಾಗೂ ಸ್ವಲ್ಪ ನೀರನ್ನು ಹಾಕಿ ನುಣ್ಣಗೆ ರುಬ್ಬಿಕೊಂಡರೆ ಚನ್ನಮಸಾಲ ರೆಡಿಯಾಗುತ್ತದೆ. ಮತ್ತೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ 1 ಚಮಚದಷ್ಟು ಎಣ್ಣೆ ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಲವಂಗ, ಏಲಕ್ಕಿ, ಸೋಂಪು ಕಾಳು, ಚಕ್ಕೆಯನ್ನು ಹಾಕಿ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಬ್ಬಿಕೊಂಡ ಮಸಾಲೆಯನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ಬೇಯಿಸಿಕೊಂಡ ಕಾಬೂಲ್ ಚೆನ್ನ ಹಾಗೂ ಕಾಬೂಲ್ ಚೆನ್ನವನ್ನು ಬೇಯಿಸಿಕೊಂಡ ನೀರನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಅಧಿಕ ಉರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿಕೊಂಡು ಗ್ಯಾಸ್ ಆಫ್ ಮಾಡಿಕೊಳ್ಳಿ. ಕೊನೆಯದಾಗಿ ಸಣ್ಣಗೆ ಹಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಮಿಕ್ಸ್ ಮಾಡಿದರೆ ಚೆನ್ನ ಮಸಾಲ ಸವಿಯಲು ಸಿದ್ಧ.

Comments are closed.