ವರ್ಕೌಟ್ ಮಾಡುತ್ತಾ ಕಂಡು ಬಂದ ದರ್ಶನ್, ಆದರೆ ಈ ರೀತಿ ಫಿಟ್ ಆಗಲು ಕ್ರಾಂತಿ ಸಿನಿಮಾ ಕಾರಣವಲ್ಲ, ಮತ್ತೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಅಗ್ರಗಣ್ಯನಾಗಿ ಕಾಣುತ್ತಾರೆ. ಇನ್ನು ಅವರ ಸಿನಿಮಾಗಳು ಎಂದರೆ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದಲ್ಲಿ ಗಲ್ಲಾಪೆಟ್ಟಿಗೆಯನ್ನು ಸೂರೆಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಸದ್ಯಕ್ಕೆ ರಾಬರ್ಟ್ ಚಿತ್ರದ ನಂತರ ವಿ ಹರಿಕೃಷ್ಣ ನಿರ್ದೇಶನದಲ್ಲಿ ಹಾಗೂ ಬಿ ಸುರೇಶ್ ಮತ್ತು ಶೈಲಜಾ ನಾಗ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಕ್ರಾಂತಿ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಕ್ರಾಂತಿ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ಬರೋಬ್ಬರಿ ಎಂಟು ವರ್ಷಗಳ ನಂತರ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ರವರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಈಗಾಗಲೇ ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದೇ ವರ್ಷದ ಅಂತ್ಯದೊಳಗೆ ಚಿತ್ರ ಬಿಡುಗಡೆಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಇನ್ನು ಇತ್ತೀಚಿಗೆ ದರ್ಶನ್ ರವರು ಕೊಂಚಮಟ್ಟಿಗೆ ತೂಕವನ್ನು ಇಳಿಸಿಕೊಂಡು ಫಿಟ್ ಆಗಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಎಲ್ಲರೂ ಇದನ್ನು ಕ್ರಾಂತಿ ಸಿನಿಮಾಗಾಗಿ ಎಂದು ಅಂದುಕೊಂಡಿದ್ದರು. ಆದರೆ ನಿಜವಾಗಿ ಹೇಳಬೇಕೆಂದರೆ ಬೇರೆ ಸಿನಿಮಾಗಾಗಿ ಈ ತರಹ ಫಿಸಿಕ್ ಅನ್ನು ಸಿದ್ಧಪಡಿಸಿಕೊಂಡಿದ್ದಾರೆ. ಹೌದು ಗೆಳೆಯರೇ ಯೋಗರಾಜ್ ಭಟ್ ನಿರ್ದೇಶನದಲ್ಲಿ ಹಾಗೂ ಬಿಸಿ ಪಾಟೀಲ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಗರಡಿ ಸಿನಿಮಾಗಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈ ಮಟ್ಟದಲ್ಲಿ ದೈಹಿಕ ಕಸರತ್ತನ್ನು ಮಾಡಿಕೊಂಡು ದೇಹವನ್ನು ಸಿದ್ಧಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆಯಾಗಿ ಡಿ ಬಾಸ್ ರವರ ಅಭಿಮಾನಿಗಳಿಗೆ ಡಿ ಬಾಸ್ ರವರನ್ನು ಈ ರೀತಿಯಾಗಿ ಕಾಣಲು ತುಂಬಾ ಸಂತೋಷವಾಗುತ್ತಿದೆ ಎಂದರೆ ತಪ್ಪಾಗಲಾರದು.

Comments are closed.