News from ಕನ್ನಡಿಗರು

ಖ್ಯಾತ ನಟ ದೇವರಾಜ್ ಹುಟ್ಟುಹಬ್ಬಕ್ಕೆ ಡಿಬಾಸ್ ದರ್ಶನ್ ಕೊಟ್ಟ ಸರ್ಪ್ರೈಸ್ ಗಿಫ್ಟ್ ? ಫುಲ್ ಹ್ಯಾಪಿ ಪಾರ್ಟಿ

16

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಡೈನಮಿಕ್ ಸ್ಟಾರ್ ದೇವರಾಜ್ ಅವರು ಸದ್ಯಕ್ಕೆ ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ನಟರಲ್ಲಿ ಒಬ್ಬರಾಗಿದ್ದಾರೆ. ಈಗಲೂ ಕೂಡ ಸಿನಿಮಾಗಳಲ್ಲಿ ಪೋಷಕನ್ನಡನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಅವರು ನಟನೆಯಲ್ಲಿ ಕೊಂಚವೂ ಕೂಡ ಮಾಸಿಲ್ಲ. ಇನ್ನು ಇತ್ತೀಚಿಗಷ್ಟೇ ಡೈನಮಿಕ್ ಸ್ಟಾರ್ ದೇವರಾಜ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಅದ್ದೂರಿಯಾಗಿ ತಮ್ಮ ಜನ್ಮ ದಿನಾಚರಣೆಯನ್ನು ಆಚರಿಸಿಕೊಂಡಿದ್ದಾರೆ.

ಇವರ ಮಕ್ಕಳಾಗಿರುವ ಪ್ರಜ್ವಲ್ ದೇವರಾಜ್ ಹಾಗೂ ಪ್ರಣಂ ದೇವರಾಜ್ ಇಬ್ಬರೂ ಕೂಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯ ರಾಗಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕೂಡ ದೇವರಾಜ್ ಕುಟುಂಬಕ್ಕೆ ಅತ್ಯಂತ ಆಪ್ತರಾಗಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಬಿಟ್ಟರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅತ್ಯಂತ ಗೌರವದಿಂದ ಕಾಣುವ ವ್ಯಕ್ತಿ ಎಂದರೆ ಅದು ದೇವರಾಜ್ ಎಂದು ಹೇಳಬಹುದು. ಇತ್ತೀಚಿನ ವರ್ಷಗಳಲ್ಲಿ ದೇವರಾಜ್ ಅವರ ಜೊತೆಗೆ ಹಲವಾರು ಸಿನಿಮಾಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಟ್ಟಿಗೆ ನಟಿಸಿದ್ದಾರೆ.

ಇನ್ನು ದೇವರಾಜ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸದಾ ಕಾಲ ನೆನಪುಳಿಯುವಂತಹ ಗಿಫ್ಟ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನೀಡಿದ್ದಾರೆ. ಹೌದು ತಾವೇ ಸ್ವತಹ ದೇವರಾಜ್ ಅವರ ಬರ್ತಡೆ ಪಾರ್ಟಿಯನ್ನು ಅರೆಂಜ್ ಮಾಡಿ ದೇವರಾಜ್ ಅವರು ಹಾಗೂ ಅವರ ಕುಟುಂಬಸ್ಥರು ಸೇರಿದಂತೆ ದರ್ಶನ್ ಅವರ ಸ್ನೇಹಿತರು ಕೂಡ ಸೇರಿ ದೇವರಾಜ್ ಅವರಿಗೆ ಜನ್ಮದಿನದ ಶುಭಾಶಯಗಳು ಕೋರುವಂತೆ ಈ ಬರ್ತಡೇ ಪಾರ್ಟಿಯ ಮೂಲಕ ಅರೇಂಜ್ ಮಾಡಿದ್ದಾರೆ ದರ್ಶನ್ ರವರು. ಡಿ ಬಾಸ್ ತಮ್ಮ ಆಪ್ತರನ್ನು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬುದನ್ನು ಈ ಮೂಲಕ ನಾವು ಅರ್ಥೈಸಿಕೊಳ್ಳಬಹುದಾಗಿದೆ.

Leave A Reply

Your email address will not be published.