ಕನ್ನಡ ವಾಣಿಜ್ಯ ಮಂಡಳಿಯಿಂದ ಬಿಡುಗಡೆಯಾಯಿತು ಕೆಜಿಎಫ್ 1 ಚಿತ್ರದ ಕಲೆಕ್ಷನ್, ಎಷ್ಟು ಕೋಟಿ ಗೊತ್ತೇ??

ನಮಸ್ಕಾರ ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಹಾಗೂ ಗೌರವವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ದು ಚಿತ್ರವೆಂದರೆ ರಾಕಿಂಗ್ ಸ್ಟಾರ್ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಂತಹ ಕೆಜಿಎಫ್ ಚಾಪ್ಟರ್ 1 ಚಿತ್ರವೆಂದರೆ ಖಂಡಿತವಾಗಿ ತಪ್ಪಾಗಲಾರದು.

ಹೌದು ಸ್ನೇಹಿತರೇ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಹಾಗೂ ರಾಕಿಂಗ್ ಸ್ಟಾರ್ ಯಶ್ ನಾಯಕ ನಟನಾಗಿ ನಟಿಸಿರುವ ಕೆಜಿಎಫ್ ಚಾಪ್ಟರ್ 1 ಕನ್ನಡ ಚಿತ್ರರಂಗದ ಕುರಿತಂತೆ ಬೇರೆ ಭಾಷೆಗಳು ಇಟ್ಟಿದ್ದಂತಹ ದೃಷ್ಟಿಕೋನವನ್ನು ಬದಲಾಯಿಸುವಂತೆ ಮಾಡಿದೆ. ಇಷ್ಟು ಮಾತ್ರವಲ್ಲದೆ ನಮ್ಮ ಚಿತ್ರರಂಗದಲ್ಲಿ ಕೂಡ ಇಂತಹ ಬಿಗ್ ಬಜೆಟ್ ಸಿನಿಮಾಗಳನ್ನು ಮಾಡಿ ವಿಶ್ವದಾದ್ಯಂತ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ವಿಜಯವನ್ನು ಸಾಧಿಸಬಹುದು ಎಂಬುದನ್ನು ಸಾಬೀತು ಮಾಡಿ ತೋರಿಸಿದೆ. ಇಷ್ಟು ಮಾತ್ರವಲ್ಲದೆ ಈಗಾಗಲೇ ವಿಶ್ವಾದ್ಯಂತ ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ಕೂಡ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಕೆಜಿಎಫ್ ಚಾಪ್ಟರ್ 1 ಬಿಡುಗಡೆಯಾದ ನಂತರ ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಚಿತ್ರಗಳ ತಯಾರಿಕೆ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಇನ್ನು ನಿನ್ನೆಯಷ್ಟೆ ನಡೆದಿರುವ ವಾಣಿಜ್ಯ ಮಂಡಳಿಯ ಸಭೆಯಲ್ಲಿ ಒಂದು ವಿಚಾರ ಹೊರಬಂದಿದೆ ಅದು ಕೂಡ ಕೆಜಿಎಫ್ ಚಾಪ್ಟರ್ ಒಂದರ ಕುರಿತಂತೆ. ಹೌದು ಸ್ನೇಹಿತರ ಕೆಜಿಎಫ್ ಚಾಪ್ಟರ್ 1 ಈಗಾಗಲೇ 500 ಕೋಟಿಗೂ ಅಧಿಕ ಹೆಚ್ಚು ಟರ್ನ್ ಓವರ್ ಮಾಡಿದೆ ಎಂಬುದಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಹಿರಿಯ ಗಣ್ಯ ವ್ಯಕ್ತಿಯೊಬ್ಬರು ಹೇಳಿ ಕೊಂಡಿದ್ದಾರೆ. ಇದು ನಿಜಕ್ಕೂ ಕೂಡ ಕನ್ನಡಿಗರು ಹೆಮ್ಮೆಪಡುವಂತಹ ವಿಷಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಕೆಜಿಎಫ್ ಚಾಪ್ಟರ್ 2 ಕೂಡ ಇದಕ್ಕಿಂತಲೂ ಅಧಿಕ ಬಿಸಿನೆಸ್ ಮಾಡಲು ಎಂಬುದೇ ನಮ್ಮ ಆಶಯ.

Comments are closed.