ನೀವು ಜಸ್ಟ್ 7 ನೇ ತರಗತಿ ಪಾಸ್ ಆಗಿದ್ದರೆ ಸಾಕು, KSRTC ಅಲ್ಲಿದೆ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ. ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬನ್ನಿ ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೋಡೋಣ.

ಕೆ ಎಸ್ ಆರ್ ಟಿ ಸಿ ತನ್ನಲ್ಲಿರು ಖಾಲಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಸದ್ಯ ಒಂದು ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಮಾರ್ಚ್ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್ 4, 2022ಕ್ಕೆ 18-40 ಮೀರಿರಬಾರದು. ಆದರೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ವೇತನದ ಬಗ್ಗೆ ನೋಡುವುದಾದರೆ, ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.11,320-15,010 ವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಎಲ್ಲಾ ಅಭ್ಯರ್ಥಿಗಳೂ 200 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಡಿಮ್ಯಾಂಡ್ ಡ್ರಾಫ್ಟ್(ಡಿಡಿ) ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗೆ ರಾಜ್ಯದ ಯಾವುದೇ ಸ್ಥಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇನ್ನು ಅಭ್ಯರ್ಥಿಗಳ ಆಯ್ಕೆಯನ್ನು ಮೆರಿಟ್ ಲಿಸ್ಟ್ ಮತ್ತು ಭೌತಿಕ ಮಾನದಂಡಗಳ ಮೇಲೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 4 ರ ಒಳಗೆ ತಮ್ಮ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಿ. ವಿಳಾಸ: ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಚೇರಿ, ಬೆಂಗಳೂರು – 27 ಹೆಚ್ಚಿನ ಮಾಹಿತಿಗಾಗಿ ksrtc.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

Comments are closed.