ನೀವು ಪಿಯುಸಿ ಪಾಸಾಗಿದ್ದರೇ ಸಾಕು, ಭಾರತೀಯ ಅಂಚೆಯಲ್ಲಿ ಸಿಗುತ್ತಿದೆ ಉದ್ಯೋಗ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??

ನಮಸ್ಕಾರ ಸ್ನೇಹಿತರೇ, ಭಾರತೀಯರಿಲ್ಲದ ಕೇಳಿ ದೊಡ್ಡ ಮಟ್ಟದಲ್ಲಿ ಉದ್ಯೋಗ ನೇಮಕಾತಿಗಳನ್ನು ನಡೆಯುತ್ತಿವೆ. ಇದು ಕೇಂದ್ರ ಸರ್ಕಾರದ ನಿಗದಿಯಾಗಿದ್ದು, ಪಿಯುಸಿ ಪಾಸಾದವರು ಇಲ್ಲಿ ಕೆಲಸವನ್ನು ಗಿಟ್ಟಿಸಿಕೊಳ್ಳಬಹುದು. ಭಾರತೀಯ ಅಂಚೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಹಾಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬನ್ನಿ ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ.

2022ರ ಆರಂಭದಲ್ಲಿ ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಸದ್ಯ, ಡಾಟಾ ಎಂಟ್ರಿ ಆಪರೇಟರ್, ಕ್ಲರ್ಕ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸತಕ್ಕದ್ದು. ಕೇಂದ್ರ ಸರ್ಕಾರದ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಮಾರ್ಚ್ 7 ಅರ್ಜಿ ಸಲ್ಲಿಸಲ ಕೊನೆಯ ದಿನಾಂಕವಾಗಿದೆ.

post office jobs | ನೀವು ಪಿಯುಸಿ ಪಾಸಾಗಿದ್ದರೇ ಸಾಕು, ಭಾರತೀಯ ಅಂಚೆಯಲ್ಲಿ ಸಿಗುತ್ತಿದೆ ಉದ್ಯೋಗ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??
ನೀವು ಪಿಯುಸಿ ಪಾಸಾಗಿದ್ದರೇ ಸಾಕು, ಭಾರತೀಯ ಅಂಚೆಯಲ್ಲಿ ಸಿಗುತ್ತಿದೆ ಉದ್ಯೋಗ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ?? 2

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷ ವಯಸ್ಸಿನ ಒಳಗಿರಬೇಕು. ಆದರೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯೂಡಿ ಯುಆರ್ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಹಾಗೂ ಪಿಡಬ್ಲ್ಯೂಡಿ ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ 19000-92000 ಮಾಸಿಕ ವೇತನ ಇರುತ್ತದೆ. ಎಸ್ಸಿಎಸ್ಟಿ/ ಪಿಡಬ್ಲ್ಯೂಡಿ /ಇಎಂಎಸ್ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 100ರೂ. ಶುಲ್ಕ ಪಾವತಿಸಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಟೈಪಿಂಗ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ. ನೀವೂ ಆಸಕ್ತರಾಗಿದ್ದಾರೆ ಕೂಡಲೇ ಅರ್ಜಿ ಸಲ್ಲಿಸಿ.

Comments are closed.