News from ಕನ್ನಡಿಗರು

ಪತಿ ಆಸ್ತಿ ಬಿಟ್ಟು ಖ್ಯಾತ ನಟಿ, ನಿರ್ದೇಶಕಿ ರಾಧಿಕಾ ರವರ ಒಟ್ಟು ಆಸ್ತಿಯ ಮೌಲ್ಯವೆಷ್ಟು ಗೊತ್ತಾ??

2,948

ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರ ರಂಗದಲ್ಲಿ ಬಹಳ ಚಿಕ್ಕ ವಯಸ್ಸಿನಲ್ಲಿಯೇ ಅತ್ಯದ್ಭುತ ನಟನೆಯ ಮೂಲಕ ಕನ್ನಡದ ಟಾಪ್ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿರುವ ರಾಧಿಕಾ ಕುಮಾರಸ್ವಾಮಿ ಅವರು ಈಗಲೂ ಕೂಡ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಚಿತ್ರಗಳಲ್ಲಿ ನಟಿಸಿ ಹಾಗೂ ನಿರ್ದೇಶನ ಮಾಡುತ್ತಿರುವ ರಾಧಿಕಾ ಕುಮಾರಸ್ವಾಮಿ ರವರು ತಮ್ಮದೇ ಆದ ಪ್ರೊಡಕ್ಷನ್ ಬ್ಯಾನರಿನಲ್ಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನು ರಾಧಿಕಾ ಕುಮಾರಸ್ವಾಮಿ ರವರು 2002 ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ಮೊದಲ ವರ್ಷದಲ್ಲಿಯೇ ಐದು ಚಿತ್ರಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡು 2007 ರವರೆಗೆ ಟಾಪ್ ನಟಿಯರಲ್ಲಿ ಒಬ್ಬರಾಗಿದ್ದರು, ತದ ನಂತರ ಕೊನೆಯದಾಗಿ 2008 ರಲ್ಲಿ ನವಶಕ್ತಿ ವೈಭವ ಚಿತ್ರದಲ್ಲಿ ನಟನೆ ಮಾಡಿ ಐದು ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡು 2013 ರಿಂದ ಮತ್ತೊಮ್ಮೆ ಸಿನಿ ಜರ್ನಿ ಯನ್ನು ಆರಂಭಿಸಿ ಅಲ್ಲಿಂದ ಇಲ್ಲಿಯವರೆಗೆ ಐದು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಇನ್ನು ಈ ವರ್ಷ ಇವರ ಮೂರು ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಈಗಾಗಲೆ ಎರಡು ಚಿತ್ರಗಳ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ, ಇನ್ನು ಒಂದು ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಭರದಿಂದ ಸಾಗುತ್ತಿದೆ. ಇನ್ನು ಇವರ ವೈಯಕ್ತಿಕ ಆಸ್ತಿಯ ಕುರಿತು ನಾವು ಮಾತನಾಡುವುದಾದರೆ ಇವರ ಪತಿ ಕುಮಾರಸ್ವಾಮಿ ಅವರನ್ನು ಹೊರತು ಪಡಿಸಿ ರಾಧಿಕಾ ಕುಮಾರಸ್ವಾಮಿ ರವರ ಬಳಿ ಬರೋಬ್ಬರಿ 110 ಕೋಟಿ ಆಸ್ತಿ ಇದೆ ಎಂಬುದು ತಿಳಿದು ಬಂದಿದೆ. ಇನ್ನು ಇವರ ನಟನೆಯ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

Leave A Reply

Your email address will not be published.