ಬಿಗ್ ನ್ಯೂಸ್: ಕಾಳಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ ಎಸ್ ಬಿ ಐ ತಿಂಗಳಿಗೆ ಬರೋಬ್ಬರಿ 60 ಸಾವಿರ ಸಂಬಳ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??

ನಮಸ್ಕಾರ ಸ್ನೇಹಿತರೇ ನೀವು ಬ್ಯಾಂಕ್ ಸೆಕ್ಟರ್ ಗಳಲ್ಲಿ ಕೆಲಸ ಮಾಡಲು ಇಚ್ಛೆ ಉಳ್ಳವರೇ? ನೀವು ಪದವೀಧರರೇ? ಹಾಗಾದರೆ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟ ಹಾಗೆ ಸಂಪೂರ್ಣ ಮಾಹಿತಿ ಕೆಳಗಿನಂತಿವೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿ ಖಾಲಿ ಇರುವ ಹುದ್ದೆ ಅಸಿಸ್ಟೆಂಟ್ ಮ್ಯಾನೇಜರ್. ಹುಟ್ಟು 48 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಮಳೆ ಇದೇ ತಿಂಗಳು ಅಂದರೆ ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

SBI Jobs | ಬಿಗ್ ನ್ಯೂಸ್: ಕಾಳಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ ಎಸ್ ಬಿ ಐ ತಿಂಗಳಿಗೆ ಬರೋಬ್ಬರಿ 60 ಸಾವಿರ ಸಂಬಳ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ??
ಬಿಗ್ ನ್ಯೂಸ್: ಕಾಳಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ ಎಸ್ ಬಿ ಐ ತಿಂಗಳಿಗೆ ಬರೋಬ್ಬರಿ 60 ಸಾವಿರ ಸಂಬಳ. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತೇ?? 2

ಒಟ್ಟು ಖಾಲಿ ಇರುವ 48 ಹುದ್ದೆಗಳಲ್ಲಿ ಅಸಿಸ್ಟೆಂಟ್ ಮ್ಯಾನೇಜರ್(ನೆಟ್​​ವರ್ಕ್​​ ಸೆಕ್ಯುರಿಟಿ ಸ್ಪೆಷಲಿಸ್ಟ್​)- 15 ಹುದ್ದೆಗಳು ಹಾಗೂ ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್)-33 ಹುದ್ದೆಗಳು ಭರ್ತಿ ಆಗಬೇಕಿವೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಹೀಗೆಯೇ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.36,000-63,840 ರೂ. ಸಂಬಳ ನೀಡಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು ಮೀರಿರಬಾರದು. ಇನ್ನು ಅರ್ಜಿಯ ಶುಲ್ಕದ ಬಗ್ಗೆ ಹೇಳುವುದಾದರೆ, ಸಾಮಾನ್ಯ/ಒಬಿಸಿ/ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಇದ್ದು, ಎಸ್ಸಿಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಅಭ್ಯರ್ಥಿಗಳನ್ನು ಆನ್ಲೈನ್ ಟೆಸ್ಟ್, ಸ್ಕ್ರೀನಿಂಗ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕಾರ್ಯನಿರ್ವಹಿಸಲು ಸಿದ್ಧರಾಗಿರಬೇಕು. ಎಸ್ ಬಿ ಐ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ sbi.co.in ಗೆ ಭೇಟಿ ನೀಡಿ.

Comments are closed.