ಬಿಗ್ ನ್ಯೂಸ್: ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಇರುತ್ತದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಅಧಿಕೃತ ಉತ್ತರ ನೀಡಿದ ಸಚಿವರು.

ನಮಸ್ಕಾರ ಸ್ನೇಹಿತರೇ, ಕರೋನಾ ಸೋಂಕು ನಮ್ಮ ದೇಶವನ್ನು ಮಾತ್ರವಲ್ಲ, ವಿಶ್ವದಾದ್ಯಂತ ಕರೋನಾ ಬಹುದೊಡ್ಡ ಸಮಸ್ಯೆಗೆ ಕಾರಣವಾಗಿತ್ತು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ವಿಶ್ವವೇ ಕಷ್ಟಕ್ಕೆ ಸಿಲುಕಿತ್ತು. ಇನ್ನು ದೇಶದ ವಿಷಯಕ್ಕೆ ಬಂದರೆ, ಕರೋನಾ ಹೆಚ್ಚು ಪರಿಣಾಮ ಬೀರಿದ್ದು ಶಾಲಾ ಕಾಲೇಜಿಗೆ ಹೋಗುವ ಮಕ್ಕಳ ಮೇಲೆ. ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ತೆರೆಯದೇ ವಿದ್ಯಾರ್ಥಿಗಳಿಗೆ ಓದುವುದಕ್ಕೆ ತೊಂದರೆಯಾಗಿತ್ತು. ಆನ್ ಲೈನ್ ತರಗತಿಯನ್ನು ಮಾಡಿದರೂ ಕೂಡ ಮಕ್ಕಳಿಗೆ ಶಿಕ್ಷಣದ ಕೊರತೆ ಉಂಟಾಗಿತ್ತು.

karnatka nagesh | ಬಿಗ್ ನ್ಯೂಸ್: ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಇರುತ್ತದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಅಧಿಕೃತ ಉತ್ತರ ನೀಡಿದ ಸಚಿವರು.
ಬಿಗ್ ನ್ಯೂಸ್: ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಇರುತ್ತದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಅಧಿಕೃತ ಉತ್ತರ ನೀಡಿದ ಸಚಿವರು. 2

ಎಸ್ ಎಸ್. ಎಲ್ ಸಿ ಸೇರಿದಂತೆ ಎಲ್ಲಾ ತರಗತಿಗಳ ಪರೀಕ್ಷೆಗಳನ್ನು ರದ್ದುಪಡಿಸಿ ಅವರ ಹಿಂದಿನ ಅಧ್ಯಯನದ ಆಧಾರದ ಮೇಲೆ ಗ್ರೇಡ್ ಗಳನ್ನು ಕೊಟ್ಟು ಉತ್ತೀರ್ಣರನ್ನಾಗಿ ಮಾಡಲಾಗಿತ್ತು. ಆದರೆ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಈ ಸ್ಥಿತಿ ಈಗಲೂ ಮುಂದುವರೆದಿದೆ! ಮಕ್ಕಳ ಓದಿನಲ್ಲಿ ಸಮಸ್ಯೆ ಉಂಟಾಗುತ್ತಿದೆ. ಆದರೆ ಈ ವರ್ಷ ಮಕ್ಕಳ ಓದಿನ ಬಗ್ಗೆ ಹೆಚ್ಚು ಚಿಂತಿತವಾಗಿರುವ ಸರ್ಕಾರ ಕೆಲವು ನೀತಿಗಳನ್ನು ಜಾರಿಗೊಳಿಸಿದೆ. ಅದರ ಪ್ರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಈ ವರ್ಷ ತಪ್ಪದೇ ನಡೆಸಲಾಗುತ್ತದೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ವಿಷಯವನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಮಾಡುವುದಿಲ್ಲ. ಬದಲಾಗಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂಬುದಾಗಿ ಹೇಳಿದ್ದಾರೆ.

ಇತ್ತೀಚಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣರನ್ನಾಗಿ ಮಾಡಲಾಗಿತ್ತು. ಯಾಕೆಂದರೆ ಕಳೆದ ವರ್ಷದ ಪರಿಸ್ಥಿತಿ ಬೇರೆಯದೇ ಆಗಿತ್ತು. ಆದರೆ ಈ ವರ್ಷ ಹೀಗಾಗುವುದಿಲ್ಲ ಎಂದಿದ್ದಾರೆ. ಕಳೆದ ವರ್ಷ ನೀಡಿದ್ದ ಸೌಲಭ್ಯ, ಪರೀಕ್ಷೆ ಇಲ್ಲದೇ ಪಾಸ್ ಮಾಡುವುದನ್ನು ಈ ವರ್ಷವೂ ಮುಂದುವರೆಸಿದರೆ ವಿದ್ಯಾರ್ಥಿಗಳು ಓದುವುದನ್ನು ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯನ್ನೂ ಮಕ್ಕಳು ಬೆಳೆಸಿಕೊಳ್ಳುತ್ತಾರೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Comments are closed.