ಕಿರುತೆರೆ ನಟಿ, ಬಿಗ್ ಬಾಸ್ ಗೆ ಕೂಡ ಬಂದಿದ್ದ ನಟಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಇತ್ತು ಕಾರಣ. ಈ ನಿರ್ಧಾರಕ್ಕೆ ಕಾರಣ ತಿಳಿದರೆ ನಿಜಕ್ಕೂ ಕಣ್ಣೀರು ಬರುತ್ತದೆ.

ಬಿಗ್ಬಾಸ್ ಶೋ ಮೂಲಕ ಜನಪ್ರಿಯರಾಗಿದ್ದ ನಟಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಜನಪ್ರಿಯ ಸೀರಿಯಲ್ ಅಲ್ಲಿ ನಟಿಸುತ್ತಿದ್ದ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸುದ್ದಿ ಎಲ್ಲರಿಗೂ ಶಾಕ್ ನೀಡಿದ್ದು ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ, ವೈಶಾಲಿ ಇಂದೋರ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವದ ಪಕ್ಕದಲ್ಲಿಯೇ ಡೆತ್ ನೋಟ್ ಕೂಡ ಸಿಕ್ಕಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ವೈಶಾಲಿ ಆತ್ಮಹತ್ಯೆ ಸುದ್ದಿ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದೆ, ಪೊಲೀಸರು ಇದರ ತನಿಖೆ ಆರಂಭಿಸಿದ್ದಾರೆ.

ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಸೀರಿಯಲ್ ಅಲ್ಲಿ ಅವರದ್ದು ಪ್ರಮುಖ ಪಾತ್ರ. ಇಂದೋರ್ನಲ್ಲಿ ಅವರು ಕಳೆದ ಒಂದು ವರ್ಷದಿಂದ ಅವರು ವಾಸವಾಗಿದ್ದರು , ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರು ಕಂಡುಬಂದಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು ತೇಜಾಜಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಗೆ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಏನಿದೆ ಎಂಬುದು ಬಹಿರಂಗಗೊಳ್ಳಬೇಕಿದೆ. ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಸಿದ ನಂತರ, ಪೊಲೀಸ್ ಸಿಬ್ಬಂದಿ ಇಂದೋರ್ನ ಸಾಯಿಬಾಗ್ ಕಾಲೋನಿಯಲ್ಲಿರುವ ವೈಶಾಲಿ ಅವರ ಮನೆಯ ಬಾಗಿಲನ್ನು ತೆರೆದರು ಮತ್ತು ಆಕೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ.

vaishali | ಕಿರುತೆರೆ ನಟಿ, ಬಿಗ್ ಬಾಸ್ ಗೆ ಕೂಡ ಬಂದಿದ್ದ ನಟಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಇತ್ತು ಕಾರಣ. ಈ ನಿರ್ಧಾರಕ್ಕೆ ಕಾರಣ ತಿಳಿದರೆ ನಿಜಕ್ಕೂ ಕಣ್ಣೀರು ಬರುತ್ತದೆ.
ಕಿರುತೆರೆ ನಟಿ, ಬಿಗ್ ಬಾಸ್ ಗೆ ಕೂಡ ಬಂದಿದ್ದ ನಟಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಇತ್ತು ಕಾರಣ. ಈ ನಿರ್ಧಾರಕ್ಕೆ ಕಾರಣ ತಿಳಿದರೆ ನಿಜಕ್ಕೂ ಕಣ್ಣೀರು ಬರುತ್ತದೆ. 2

ಆಕೆಯ ಕೋಣೆಯಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ ಆದರೆ ಅದರ ವಿಷಯಗಳನ್ನು ಈಗ ಬಹಿರಂಗಪಡಿಸಲಾಗಿಲ್ಲ, ಏಕೆಂದರೆ ಅದು ತನಿಖೆಯ ವಿಷಯವಾಗಿದೆ ಎಂದು ಹೇಳಿದ್ದಾರೆ. ತೇಜಾಜಿ ನಗರ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇದು ಪ್ರೀತಿಗೆ ಸಂಬಂಧಿಸಿದ್ದು ಎಂಬ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಹೇಳುವಂತೆ, ಪ್ರಾಥಮಿಕ ತನಿಖೆಯಲ್ಲಿ ಈ ವಿಷಯವು ಪ್ರೀತಿಗೆ ಸಂಬಂಧಿಸಿದ್ದಾಗಿದೆ ಎಂದು ಕಂಡುಬಂದಿದೆ. ಪೊಲೀಸರು ಇದು ಗಂಭೀರ ಪ್ರಕರಣ ಎಂದು ತನಿಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲ. ವೈಶಾಲಿ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಆದರೆ ಇದು ಪ್ರೇಮ ವೈಫಲ್ಯವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತ್ಮಹತ್ಯೆ ಪತ್ರದಲ್ಲಿ ಏನು ಬರೆದಿದ್ದಾರೋ ಗೊತ್ತಾಗಿಲ್ಲ.

Comments are closed.