ಸಿಬಿಐ ನಂತರ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಬಿಗ್ ಶಾಕ್ ! ಉತ್ತರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ??

ಸ್ನೇಹಿತರೇ, ಇದೀಗ ಡಿಕೆ ಶಿವಕುಮಾರ್ ರವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊಟ್ಟಮೊದಲ ಬಾರಿಗೆ ಉಪಚುನಾವಣೆ ನಡೆಯುತ್ತಿದೆ. ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹೈಕಮಾಂಡ್ ತನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಬಲ್ಲೆ ಎಂಬುದನ್ನು ಹೈಕಮಾಂಡ್ ಮುಂದೆ ನಿರೂಪಿಸಲು ಡಿಕೆ ಶಿವಕುಮಾರ್ ಅವರು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಅಂದುಕೊಂಡಂತೆ ಎಲ್ಲಾ ನಡೆಯುತ್ತಿರುವ ಸಂದರ್ಭದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರಿಗೆ ಶಾಕ್ ನೀಡಿದ್ದು, ಬಹುಶಃ ನಿಮಗೆಲ್ಲರಿಗೂ ತಿಳಿದಿರುವ ಮಾಹಿತಿ. ಇದರಿಂದ ಕಾಂಗ್ರೆಸ್ ಪಕ್ಷ ಶಾಕ್ ಗೆ ಗುರಿಯಾಗಿತ್ತು. ಉಪಚುನಾವಣೆಯ ಸಂದರ್ಭದಲ್ಲಿ ಲಕ್ಷ ಲಕ್ಷ ಹಣ ಸಿಕ್ಕಿಬಿದ್ದಿರುವುದು ಜನತೆಯ ಮುಂದೆ ಭಾರಿ ಮುಜುಗರ ಉಂಟಾಗುವಂತೆ ಮಾಡಿದೆ. ಒಂದೆಡೆ ಡಿಕೆ ಸುರೇಶ್ ರವರು ಒಂದೆರಡು ಲಕ್ಷ ಸಿಕ್ಕಿರಬಹುದು ಎಂದರೇ ಮತ್ತೊಂದು ಕಡೆಯಿಂದ 50 ಲಕ್ಷ ಹಣ ಸಿಕ್ಕಿಬಿದ್ದಿರುವ ಖಚಿತ ಮಾಹಿತಿ ಲಭ್ಯವಾಗಿದೆ.

ಇಷ್ಟೆಲ್ಲ ಮುಜುಗರಗಳನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ ನೀಡಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೌದು ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಭದ್ರವಾಗಿ ನೆಲೆಯೂರಿದೆ. ಇತರ ಪಕ್ಷಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಕಾರುಬಾರು ಹೆಚ್ಚು. ಆದರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಅಲೆಯ ನಡುವೆಯೂ ಕೂಡ ಯುವ ನಾಯಕ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ರವರು ಬಿಜೆಪಿ ಪಕ್ಷದ ವಿರುದ್ಧ ಗೆದ್ದು ಪ್ರಬಲ ನಾಯಕನಾಗಿ ಮುಂದುವರಿಯುವ ಸೂಚನೆ ನೀಡಿದ್ದರು.

ಆದರೆ ಒಂದೆಡೆ ಕಾಂಗ್ರೆಸ್ ಪಕ್ಷವು ಉಪ ಚುನಾವಣೆಯ ತಯಾರಿಯಲ್ಲಿ ನಿರತವಾಗಿರುವ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಬಿಜೆಪಿ ಪಕ್ಷ ಸೇರಲು ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇದೇ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದ್ದು, ದಕ್ಷಿಣ ಕರ್ನಾಟಕದ ಬಿಜೆಪಿ ನಾಯಕರು ವಿನಯ್ ಕುಲಕರ್ಣಿ ರವರನ್ನು ಬಿಜೆಪಿ ಪಕ್ಷಕ್ಕೆ ಕರೆತರುವ ಮೂಲಕ ಉತ್ತರ ಕರ್ನಾಟಕದ ಮತ್ತೊಂದು ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಾಬಲ್ಯ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ಈಗಾಗಲೇ ಪಕ್ಷಾಂತರದಿಂದ ಮೈತ್ರಿ ಸರ್ಕಾರ ಉರುಳಿದ್ದು ಇದೀಗ ಮತ್ತೊಂದು ವಿಕೆಟ್ ಪತನವಾಗುವ ಸೂಚನೆ ನೀಡಿದೆ. ಒಂದು ವೇಳೆ ಅದೇ ನಡೆದಲ್ಲಿ ಬಿಜೆಪಿ ಪಕ್ಷದ ಭದ್ರಕೋಟೆಗೆ ಮತ್ತಷ್ಟು ಬಲ ಬರಲಿದ್ದು, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬಾವುಟ ಮತ್ತಷ್ಟು ರಾರಾಜಿಸಲಿದೆ.

Comments are closed.